1 ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. 2 ಆ ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು. 3 ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.
ಮಂಜೂಷದ ಮುಂದೆ ಹಾಡಿದ ಕೀರ್ತನೆ
4 ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು. 5 ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು. 6 ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ತೂರಿಗಳನ್ನು ಊದುವುದಕ್ಕೆ ನೇಮಕವಾದರು. 7 ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ;
8 “ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.
9 ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.
32 ಭೂನಿವಾಸಿಗಳಿಗೆ ನ್ಯಾಯತೀರಿಸುವುದಕ್ಕೆ ಬರುವನೆಂದು ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ.
33 ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ.
34 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.
35 ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ.
36 ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.
ಯೆರೂಸಲೇಮ್ ಮತ್ತು ಗಿಬ್ಯೋನಿನಲ್ಲಿ ಆರಾಧನೆ
37 ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ, 38 ಯೆದುತೂನನ ಮಗನಾದ ಓಬೇದೆದೋಮ್ ಮತ್ತು ಹೋಸ ಇವರನ್ನು, ಅವರ ಆರುವತ್ತೆಂಟು ಸಹೋದರರನ್ನೂ ಅಲ್ಲೇ ಇರಿಸಿದನು. 39 ಯಾಜಕನಾದ ಚಾದೋಕನನ್ನೂ, ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು. 40 ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು. 41 ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು. 42 ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.
43 ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು.