1-2 ಅದೇ ರೀತಿಯಾಗಿ ಪತ್ನಿಯರೇ, [a]ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ [b]ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು. 3 [c]ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು. 4 ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ [d]ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. 5 ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ [e]ಅಧೀನರಾಗಿದ್ದರು. 6 ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು [f]ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ [g]ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ.
7 [h]ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.
8 ಕಡೆಗೆ [i]ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, [j]ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, [k]ಕರುಣೆಯೂ, [l]ದೀನಭಾವವೂ ಉಳ್ಳವರಾಗಿರಿ. 9 [m]ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ [n]ಆಶೀರ್ವದಿಸಿರಿ. [o]ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ. 10 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ,
13 ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ? 14 ಒಂದು ವೇಳೆ ನೀವು [q]ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. [r]ಅವರ ಬೆದರಿಕೆಗೆ ಹೆದರಬೇಡಿರಿ, [s]ಕಳವಳಪಡಬೇಡಿರಿ. 15 ಆದರೆ [t]ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ [u]ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ. 16 [v]ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ [w]ಆಗ ಕ್ರಿಸ್ತನಲ್ಲಿರುವ ನಿಮ್ಮ [x]ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು. 17 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ. 18 ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು [y]ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ [z]ಒಂದೇ ಸಾರಿ ಪಾಪನಿವಾರಣೆಗೋಸ್ಕರ [aa]ಬಾಧೆಪಟ್ಟು ಸತ್ತನು. [bb]ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು. 19 [cc]ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು. 20 ಅಂದರೆ ಪೂರ್ವಕಾಲದಲ್ಲಿ [dd]ನೋಹನು ನಾವೆಯನ್ನು ಕಟ್ಟುತ್ತಿರಲು [ee]ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ [ff]ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು. 21 ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು [gg]ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ [hh]ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ [ii]ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ. 22 [~36~]ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, [~37~]ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.
<- 1 ಪೇತ್ರನು 21 ಪೇತ್ರನು 4 ->*3:1-2 3:1-2 ಆದಿ 3:16:
†3:1-2 3:1-2 1 ಕೊರಿ 7:16:
c 3:3 1 ತಿಮೊ. 2:9; ಯೆಶಾ 3:18-23: d 3:4 ರೋಮಾ. 2:29: e 3:5 ಅಥವಾ, ಅಧೀನರಾಗಿದ್ದರು. ಸಾರಳು ಹಾಗೆಯೇ ಕರೆದಳು. ನೀವು ಒಳ್ಳೆಯದನ್ನು ಮಾಡುವವರಾಗಿ ಯಾವ ಭೀತಿಗೂ ಗಾಬರಿಪಡದೆ ಇದ್ದರೆ ನೀವು ಸಾರಳ ಕುಮಾರ್ತೆಯರೇ. f 3:6 ಆದಿ 18:12: g 3:6 ಜ್ಞಾ. 3:25: h 3:7 ಎಫೆ 5:25; ಕೊಲೊ 3:19: i 3:8 ರೋಮಾ. 12:16: j 3:8 ಇಬ್ರಿ. 13:1: k 3:8 ಎಫೆ 4:32: l 3:8 ಎಫೆ 4:2: m 3:9 1 ಪೇತ್ರ. 2:23; ರೋಮಾ. 12:17: n 3:9 ಲೂಕ 6:28; ರೋಮಾ. 12:14; 1 ಕೊರಿ 4:12: o 3:9 1 ಪೇತ್ರ. 2:21: p 3:10 ಕೀರ್ತ 34:12-16: q 3:14 1 ಪೇತ್ರ. 2:19, 20; 4:14, 16; ಮತ್ತಾ 5:10: r 3:14 ಅಥವಾ, ಅವರು ಯಾವುದಕ್ಕೆ ಹೆದರುತ್ತಾರೋ ಅದಕ್ಕೆ ನೀವು ಹೆದರದೆ; ವ. 6; ಯೆಶಾ 8:12, 13; ಮತ್ತಾ 10:28: s 3:14 ಯೋಹಾ 14:1, 27: t 3:15 ಯೆಶಾ 8:13; 29:23: u 3:15 ಕೊಲೊ 4:6: v 3:16 ಇಬ್ರಿ. 13:18: w 3:16 1 ಪೇತ್ರ. 2:12: x 3:16 1 ಪೇತ್ರ. 2:20; 1 ಪೇತ್ರ. 4:15, 16: y 3:18 ರೋಮಾ. 5:2: z 3:18 ಇಬ್ರಿ. 9:26, 28: aa 3:18 1 ಪೇತ್ರ. 2:21; 4:1; ರೋಮಾ. 4:25: bb 3:18 1 ಪೇತ್ರ. 4:1; ಕೊಲೊ 1:22: cc 3:19 ಅಥವಾ, ಇದಲ್ಲದೆ ಸೆರೆಯಲ್ಲಿರುವ ಆತ್ಮಗಳು ಪೂರ್ವದಲ್ಲಿ ನಂಬದೆ ಇದ್ದಾಗ, ಅಂದರೆ ನೋಹನು ಕಾದಿದ್ದಾಗ ಆತನು ಆತ್ಮ ಸ್ವರೂಪವಾಗಿಯೇ ಅವುಗಳ ಬಳಿಗೆ ಹೋಗಿ. dd 3:20 ಇಬ್ರಿ. 11:7: ee 3:20 ಆದಿ 6:3, 5, 13, 14: ff 3:20 ಆದಿ 7:1,7,23; 8:18. gg 3:21 1 ಪೇತ್ರ. 1:3. hh 3:21 ಮಾರ್ಕ 16:16; ಅ. ಕೃ. 16:33; ರೋಮಾ. 6:3-6; ತೀತ. 3:5. ii 3:21 ಅಥವಾ. ಒಳ್ಳೆಯ ಮನಸ್ಸಾಕ್ಷಿಯಿಂದ. ~36~ 3:22 ಅ. ಕೃ. 2:33, 34; ರೋಮಾ. 8:34; ಎಫೆ 1:20; ಕೊಲೊ; 3:1; ಇಬ್ರಿ. 1:3: ~37~ 3:22 ರೋಮಾ. 8:38; 1 ಕೊರಿ 15:24; ಎಫೆ 1:21: