1 ದಾರ್ಯಾವೆಷನ ಆಳ್ವಿಕೆಯ ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಮತ್ತೊಮ್ಮೆ ಈ ವಾಕ್ಯವನ್ನು ಕೊಟ್ಟು, 2 “ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,
10 ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು. 11 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ, 12 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.
13 ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು. 14 ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ.
15 “ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ; 16 ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ[a] ರಾಶಿಗೆ ಬಂದಾಗ ಹತ್ತು ಸೇರು[b] ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು. 17 ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.
18 “ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ. 19 ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”
20 ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ, 21 “ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,
-
a 2:16 ಇಪ್ಪತ್ತು ಸೇರಿನ ಸುಮಾರು 200 ಕಿಲೋಗ್ರಾಂ.
b 2:16 ಹತ್ತು ಸೇರು ಸುಮಾರು 100 ಕಿಲೋಗ್ರಾಂ.