1 “ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ.
2 ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು. 3 ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು. 4 ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.
7 ಆಹಾ, ಮುಂದಿನ ಕಾಲದಲ್ಲಿ ಜನರು, “ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು, 8 ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.
25 ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ. 26 ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ. 27 ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು? 28 ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ. 29 ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.
30 ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ. 31 ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ. 32 ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.
33 ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು. 34 ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು. 35 ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಮತ್ತು ಅಣ್ಣತಮ್ಮಂದಿರನ್ನೂ, ‘ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ?’ 36 ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ. 37 ನೀವು ‘ಯೆಹೋವನಿಂದ ನಿನಗೆ ಯಾವ ಉತ್ತರವಾಯಿತು, ಯೆಹೋವನು ಏನು ನುಡಿದಿದ್ದಾನೆ’ ಎಂದು ಪ್ರವಾದಿಯನ್ನು ಕೇಳಿರಿ. 38 ಒಂದು ವೇಳೆ ನೀವು ‘ಯೆಹೋವನ ಹೊರೆ’ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, ‘ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ, 39 ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು. 40 ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.’ ”
<- ಯೆರೆಮೀಯನು 22ಯೆರೆಮೀಯನು 24 ->-
a 23:14 ಸೊದೋಮಿನಂತೆ, ಸೊದೋಮ್ ಮತ್ತು ಗೊಮೋರವು ಅವರ ದುಷ್ಟತನದ ನಿಮಿತ್ತ ಕರ್ತನಿಂದ ನಾಶವಾದ ಪಟ್ಟಣಗಳಾಗಿವೆ (ಆದಿ 18:20; 19:24-25 ನೋಡಿರಿ).