1 ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ, 2 ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.
3 ಆಗ ಸೈತಾನನು ಆತನಿಗೆ, “ನೀನು ದೇವರ ಮಗನಾಗಿದ್ದರೆ ಈ ಕಲ್ಲನ್ನು ರೊಟ್ಟಿಯಾಗುವಂತೆ ಅಪ್ಪಣೆ ಕೊಡು” ಎಂದು ಹೇಳಲು,
4 ಯೇಸು ಅವನಿಗೆ,
5 ಬಳಿಕ ಸೈತಾನನು ಆತನನ್ನು ಎತ್ತರಕ್ಕೆ ಕರೆದುಕೊಂಡು ಹೋಗಿ, ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ, 6 “ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಡಲ್ಪಟ್ಟಿದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ; 7 ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವುದು” ಎಂದು ಆತನಿಗೆ ಹೇಳಿದನು.
8 ಅದಕ್ಕೆ ಯೇಸು,
9 ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು. 10 ‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು; 11 ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು.
12 ಅದಕ್ಕೆ ಆತನು,
13 ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು.
14 ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು. 15 ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.
16 ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು. 17 ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು,
20 ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ, 21 ಆತನು ಅವರಿಗೆ,
23 ಅದಕ್ಕೆ ಯೇಸು ಅವರಿಗೆ,
28 ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು, 29 ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು. 30 ಆದರೆ ಆತನು ಅವರ ಮಧ್ಯದಿಂದ ನಡೆದು ತನ್ನ ಪಾಡಿಗೆ ತಾನು ಹೊರಟು ಹೋದನು.
31 ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು, 32 ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು. 33-34 ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು. 35 ಯೇಸು ದೆವ್ವವನ್ನು ಗದರಿಸಿ,
38 ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು. 39 ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.
40 ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು. 41 ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.
42 ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು. 43 ಆದರೆ ಆತನು ಅವರಿಗೆ,
44 ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು.
<- ಲೂಕನು 3ಲೂಕನು 5 ->