1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು. 2 ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.
3 ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು, 4 ಯೇಸು, [a]
5 ಆಗ ಸೈತಾನನು ಯೇಸುವನ್ನು [b]ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ 6 ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; [c]‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು. 7 ಅದಕ್ಕೆ ಯೇಸು, [d]
11 ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.
12 ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು. 13 ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು. 14 ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು[f]; ಆ ಮಾತು ಏನೆಂದರೆ, 15 [g]“ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ, 16 ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು. 17 ಅಂದಿನಿಂದ ಯೇಸು,
18 ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು. 19 ಅವರಿಗೆ ಆತನು,
23 ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು. 24 ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು. 25 ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.
<- ಮತ್ತಾಯನು 3ಮತ್ತಾಯನು 5 ->