1 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು. 2 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಯಜ್ಞವೇದಿಯ ಮೇಲೆ ಒಂದು ಹೋರಿಯನ್ನು ಮತ್ತು ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. 3 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
4 ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು. 5 ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು. 6 ಬಿಳಾಮನು ಬಾಲಾಕನ ಬಳಿಗೆ ಹಿಂತಿರುಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಯಜ್ಞವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು.
7 ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ,
13 ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು. 14 ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು. 15 ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು.
16 ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟನು. ಆಗ ಅವನು ಹೇಳಿದ್ದೇನೆಂದರೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಹೀಗೆ ಹೇಳಬೇಕು” ಎಂದನು. 17 ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದನು. 18 ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ,
27 ತರುವಾಯ ಬಾಲಾಕನು ಬಿಳಾಮನಿಗೆ, “ಬೇರೊಂದು ಸ್ಥಳಕ್ಕೆ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವುದಕ್ಕೆ ದೇವರು ಅನುಮತಿ ಕೊಡಬಹುದು” ಎಂದು ಹೇಳಿದನು.
28 ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ. 29 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು 30 ಬಿಳಾಮನ ಅಪ್ಪಣೆಯ ಪ್ರಕಾರ ಬಾಲಾಕನು ಪ್ರತಿಯೊಂದು ಯಜ್ಞ ವೇದಿಯಲ್ಲಿ ಒಂದು ಹೋರಿಯನ್ನೂ. ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
<- ಅರಣ್ಯಕಾಂಡ 22ಅರಣ್ಯಕಾಂಡ 24 ->