1 ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಆರೋನನ ಮಗನೂ, ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡ ಮಾತನಾಡಿ, 2 “ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು. 3 ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬ್ಯರ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಹತ್ತಿರ ಅವರ ಸಂಗಡ ಮಾತನಾಡಿ, 4 “ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ ಐಗುಪ್ತ ದೇಶದಿಂದ ಹೊರಟ್ಟಿದ್ದ ಮತ್ತು ಮಹಾಯಾಜಕನಾದ ಎಲ್ಲಾಜಾರನೂ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಲೆಕ್ಕಿಸಿರಿ” ಎಂದನು. 5 ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು, 6 ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರು, ಕರ್ಮೀಯ ವಂಶಸ್ಥರಾದ ಕರ್ಮೀಯರು ಇವರೇ.
7 ಇವರೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ.
8 ಪಲ್ಲೂವಿನ ಮಗನು ಎಲೀಯಾಬ್. 9 ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ.
10 ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು. 11 ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.
12 ಸಿಮೆಯೋನ್ ಕುಲದ ಕುಟುಂಬಗಳು ಯಾವುವೆಂದರೆ:
14 ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ.
15 ಗಾದ್ ಕುಲದ ಕುಟುಂಬಗಳು ಯಾವುವೆಂದರೆ:
18 ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ.
19 ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು. 20 ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ:
23 ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ:
26 ಜೆಬುಲೂನ್ ಕುಲದ ಕುಟುಂಬಗಳು ಯಾವುವೆಂದರೆ:
28 ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್. 29 ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ:
33 ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ.
34 ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.
35 ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು, 36 ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ. 37 ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.
38 ಬೆನ್ಯಾಮೀನ್ ಕುಲದ ಕುಟುಂಬಗಳು ಯಾವುವೆಂದರೆ:
42 ದಾನ್ ಕುಲದ ಕುಟುಂಬಗಳು ಯಾವುವೆಂದರೆ: ಶೂಹಾಮನ ವಂಶಸ್ಥರಾದ ಶೂಹಾಮ್ಯರು. 43 ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ.
44 ಆಶೇರ್ ಕುಲದ ಕುಟುಂಬಗಳು:
48 ನಫ್ತಾಲಿ ಕುಲದ ಕುಟುಂಬಗಳು:
50 ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ.
51 ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730.
52 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, 53 “ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು. 54 ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು. 55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು. 56 ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.”
57 ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು:
59 ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು.
60 ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವವರು ಹುಟ್ಟಿದರು. 61 ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಸತ್ತುಹೋದರು. 62 ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.
63 ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು. 64 ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ. 65 ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.
<- ಅರಣ್ಯಕಾಂಡ 25ಅರಣ್ಯಕಾಂಡ 27 ->