1 [a]ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ. 2 ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು. 3 ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ. 4 ಅವರು ಇಸ್ರಾಯೇಲಿನ ವಂಶದವರು. [b]ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; [c]ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ [d]ಅವರಿಗೆ ಧರ್ಮಶಾಸ್ತ್ರವು, [e]ದೇವಾಲಯದಲ್ಲಿ ನಡೆಯುವ ಆರಾಧನೆಯೂ, [f]ವಾಗ್ದಾನಗಳೂ ಕೊಡಲ್ಪಟ್ಟವು. 5 ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು [g]ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.
6 [h]ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ. 7 ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ [i]“ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು. 8 ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. [j]ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು. 9 [k]“ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ. 10 ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು. 11-12 ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ [l]“ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ [m]ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ. 13 ಇದಕ್ಕನುಸಾರವಾಗಿ [n]“ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು [o]ದ್ವೇಷಿಸಿದನು” ಎಂದು ಬರೆದದೆ.
14 ಹಾಗಾದರೆ ಏನು ಹೇಳೋಣ? [p]ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ. 15 [q]“ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ. 16 ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ. 17 ದೇವರು ಫರೋಹನನನ್ನು ಕುರಿತು [r]“ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ. 18 ದೇವರು [s]ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.
19 [t]“ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ. 20 ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? [u]ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ? 21 [v]ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ [w]ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? 22 ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ. 23 ಮತ್ತು [x]ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ [y]ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ. 24 ಆತನು ಕರುಣಿಸಿದ ನಮ್ಮನ್ನು [z]ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ [aa]ಕರೆದನು. 25 ಆ ವಚನವೇನಂದರೆ,
27 ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: [dd]“ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ [ee]ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ. 28 ಅದೇ ಅಭಿಪ್ರಾಯದಿಂದ ಯೆಶಾಯನು [ff]ಮತ್ತೊಂದು ವಚನದಲ್ಲಿ, 29 [gg]“ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ
30 ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ [ii]ಅನ್ಯಜನರಿಗೆ ನೀತಿಯು ಅಂದರೆ [jj]ನಂಬಿಕೆಯಿಂದುಂಟಾದ ನೀತಿಯು ದೊರಕಿತು. 31 ಆದರೆ ನೀತಿಯನ್ನು ಹಿಂಬಾಲಿಸಿದ್ದ [kk]ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು. 32 ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ, 33 [ll]ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ,
-
a 9:1 2 ಕೊರಿ 11:10; 1 ತಿಮೊ. 2:7; ಗಲಾ. 1:20
b 9:4 ವಿಮೋ 4:22, ರೋಮಾ. 8:15
c 9:4 ಆದಿ 17:2, ಧರ್ಮೋ 29:14, ಗಲಾ. 4:24
d 9:4 ಧರ್ಮೋ 4:14
e 9:4 ಇಬ್ರಿ. 9:1
f 9:4 ಎಫೆ 2:12, ಅ. ಕೃ. 13:32
g 9:5 ರೋಮಾ. 1:25, 2 ಕೊರಿ 11:31, ಎಫೆ 4:6, ಇಬ್ರಿ. 1:8
h 9:6 ಗಲಾ. 4:23
i 9:7 ಆದಿ 21:12, ಇಬ್ರಿ 11:18
j 9:8 ಗಲಾ. 4:23, 28
k 9:9 ಆದಿ 18:10; 14:17,21
§9:11-12 9:11-12 ಆದಿ 25:23
*9:11-12 9:11-12 ರೋಮಾ. 4:17, 8:28
n 9:13 ಮಲಾ. 1:2-3 o 9:13 ಅಥವಾ ಅಲಕ್ಷ್ಯ ಮಾಡಿದೆನು, ಮತ್ತಾ 6:24, ಲೂಕ 25:23, ಯೋಹಾ 12:25 p 9:14 ಧರ್ಮೋ 32:4, 2 ಪೂರ್ವ 19:7, ಯೋಬ. 8:3, 34:10, ಕೀರ್ತ 92:15 q 9:15 ವಿಮೋ 33:19 r 9:17 ವಿಮೋ 9:16 s 9:18 ವಿಮೋ 4:21, 9:12, 11:10, 14:4, ಧರ್ಮೋ 2:30 t 9:19 2 ಪೂರ್ವ 20:6, ಯೋಬ. 9:12, ದಾನಿ. 4:35 u 9:20 ಯೆಶಾ 29:16, 45:9 v 9:21 2 ತಿಮೊ. 2:20 w 9:21 ಯೆಶಾ 64:8, ಯೆರ. 18:6 x 9:23 ರೋಮಾ. 8:29-30 y 9:23 ಎಫೆ 3:17 z 9:24 ರೋಮಾ. 3:29 aa 9:24 ರೋಮಾ. 8:25 bb 9:25 ಹೋಶೇ. 2:23, 1:10 cc 9:26 ರೋಮಾ. 8:14, ಮತ್ತಾ 16:16 dd 9:27 ಯೆಶಾ 10:22,23 ee 9:27 ರೋಮಾ. 11:5 ff 9:28 ಯೆಶಾ 1:9 gg 9:29 ಯಾಕೋಬ. 5:4 hh 9:29 ಆದಿ 19:24-25; ಧರ್ಮೋ 29:23. ii 9:30 ರೋಮಾ. 10:20 jj 9:30 ರೋಮಾ. 1:17, 3:21-22, 10:6, ಗಲಾ. 2:16, 3:24, ಇಬ್ರಿ. 11:7 kk 9:31 ರೋಮಾ. 10:2-3, 11:7, ಗಲಾ. 5:4 ll 9:33 1 ಪೇತ್ರ. 2:8 mm 9:33 ಯೆಶಾ 28:16, 8:14, 1 ಪೇತ್ರ. 2:6-7 ~40~ 9:33 ಆತನ ಮೇಲೆ ~41~ 9:33 ಯೆಶಾ 49:23, ಯೋವೇ. 2:26-27