1 ಇವುಗಳಲ್ಲದೆ, ಸೊಲೊಮೋನನು ಕಂಚಿನ ಬಲಿಪೀಠವನ್ನು ಮಾಡಿಸಿದನು; ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ ಸುಮಾರು ಐದು ಮೀಟರ್. 2 ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು; ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್; ಅದರ ಎತ್ತರ ಸುಮಾರು ಎರಡು ಮೀಟರ್; ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು; 3 ಅದರ ಅಂಚಿನ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೀಟರಿಗೆ ಹತ್ತರಂತೆ, ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು; ಇದು ಎರಕ ಹೊಯ್ಯುವಾಗ, ಎತ್ತುಗಳ ರೂಪಗಳು ಎರಡು ಸಾಲಾಗಿ ಎರಕ ಹೊಯ್ಸಿದನು.
4 ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ, ಮೂರು ಪಶ್ಚಿಮಕ್ಕೂ, ಮೂರು ದಕ್ಷಿಣಕ್ಕೂ, ಮೂರು ಪೂರ್ವಕ್ಕೂ ಮುಖಮಾಡಿಕೊಂಡಿದ್ದವು. ಆ ಕೊಳವು ಅವುಗಳ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಮುಖವಾಗಿದ್ದವು. 5 ಅದರ ದಪ್ಪವು ಅಂಗೈ ಅಗಲದಷ್ಟಾಗಿಯೂ, ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ, ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಅರವತ್ತಾರು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.
6 ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ, ಅವುಗಳಲ್ಲಿ ತೊಳೆಯುವ ನಿಮಿತ್ತವಾಗಿ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿದನು. ದಹನಬಲಿಗೋಸ್ಕರ ಅರ್ಪಿಸುವವುಗಳನ್ನು ಅವುಗಳಲ್ಲಿ ತೊಳೆಯುತ್ತಿದ್ದರು. ಆದರೆ ಆ ಕೊಳವು ಯಾಜಕರು ತೊಳೆದುಕೊಳ್ಳುವುದಕ್ಕೆ ಇತ್ತು.
7 ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು.
8 ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬಟ್ಟಲುಗಳನ್ನು ಮಾಡಿಸಿದನು.
9 ಯಾಜಕರ ಅಂಗಳವನ್ನೂ, ದೊಡ್ಡ ಅಂಗಳವನ್ನೂ, ಅಂಗಳಗಳಿಗೋಸ್ಕರ ಬಾಗಿಲುಗಳನ್ನೂ ಮಾಡಿಸಿ, ಆ ಬಾಗಿಲುಗಳನ್ನು ಕಂಚಿನಿಂದ ಹೊದಿಸಿದನು. 10 ಸಮುದ್ರ ಎಂದು ಕರೆಯಲಾದ ದೊಡ್ಡ ಪಾತ್ರೆಯನ್ನು ಬಲಗಡೆಯಲ್ಲಿ ಅಂದರೆ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು.
11 ಇದಲ್ಲದೆ ಹೂರಾಮನು[a] ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು.
19 ಸೊಲೊಮೋನನು ದೇವರ ಆಲಯದ ಎಲ್ಲಾ ಸಲಕರಣೆಗಳನ್ನು ಮಾಡಿಸಿದನು. ಅವು ಯಾವುವೆಂದರೆ: