1 ದೇವರ ಆಲಯಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂರ್ಖರು ಅರ್ಪಿಸುವ ಯಜ್ಞಕ್ಕಿಂತ, ದೇವರ ಸಮೀಪವಾಗಿದ್ದು ಅವರಿಗೆ ಕಿವಿಗೊಟ್ಟು ಆಲಿಸುವುದು ಲೇಸು. ತಾವು ತಪ್ಪು ಮಾಡುತ್ತಿದ್ದಾರೆಂದು ಮೂಢರಿಗೆ ತಿಳಿಯುವುದಿಲ್ಲ.
4 ದೇವರಿಗೆ ನೀನು ಹರಕೆಯನ್ನು ಮಾಡಿದರೆ, ಅದನ್ನು ತೀರಿಸಲು ತಡಮಾಡಬೇಡ. ದೇವರು ಮೂಢರನ್ನು ಮೆಚ್ಚುವುದಿಲ್ಲ. ನೀನು ಹರಕೆ ಮಾಡಿದ್ದನ್ನು ತೀರಿಸು. 5 ಹರಕೆಮಾಡಿ ತೀರಿಸದೆ ಇರುವುದಕ್ಕಿಂತ, ಹರಕೆ ಮಾಡದೆ ಇರುವುದು ಒಳ್ಳೆಯದು. 6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು? 7 ಬಹು ಕನಸುಗಳೂ ಬಹು ಮಾತುಗಳೂ ವ್ಯರ್ಥವಾದವುಗಳು. ಆದ್ದರಿಂದ ನೀನು ದೇವರಿಗೆ ಭಯಪಡು.
8 ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ. 9 ಭೂಮಿಯಿಂದ ಲಾಭವು ಎಲ್ಲರಿಗೂ ಇದೆ. ಹೊಲಗದ್ದೆಗಳಿಂದ ಅರಸನಿಗೂ ಲಾಭವಿದೆ.
13 ಸೂರ್ಯನ ಕೆಳಗೆ ವ್ಯಸನಕರವಾದ ಕೇಡನ್ನು ನಾನು ನೋಡಿದೆ. ಅದು ಯಾವುದೆಂದರೆ:
16 ಇದು ಕೂಡ ವ್ಯಸನಕರವಾದ ಕೇಡು:
18 ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು. 19 ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ. 20 ಇಂಥವನು ತನ್ನ ಜೀವಮಾನದ ದಿನಗಳನ್ನು ಗಣನೆಗೆ ತಂದುಕೊಳ್ಳನು. ಏಕೆಂದರೆ ಇವನು ತನ್ನ ಹೃದಯಾನಂದದಲ್ಲಿ ಮಗ್ನನಾಗಿರುವಂತೆ ದೇವರು ಮಾಡಿದ್ದಾರೆ.
<- ಪ್ರಸಂಗಿ 4ಪ್ರಸಂಗಿ 6 ->