1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, 2 “ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖವಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸಿ, 3 ‘ಇಸ್ರಾಯೇಲ್ ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರಗೆ ತೆಗೆದು, ನಿನ್ನೊಳಗಿರುವ ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವೆನು. 4 ಆಮೇಲೆ ನಾನು ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವುದರಿಂದ ನನ್ನ ಖಡ್ಗವು ದಕ್ಷಿಣದಿಂದ ಮೊದಲುಗೊಂಡು ಉತ್ತರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆಯನ್ನು ಬಿಟ್ಟು ಹೋಗುವುದು. 5 ಆಗ ಯೆಹೋವ ದೇವರಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹೊರಗೆ ತೆಗೆದೆನೆಂದು ಜನರೆಲ್ಲರಿಗೂ ತಿಳಿಯುವುದು, ಅದು ಮತ್ತೆ ತಿರುಗಿ ಬರುವುದೇ ಇಲ್ಲ.’
6 “ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು. 7 ‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
8 ಯೆಹೋವ ದೇವರ ವಾಕ್ಯವು ನನಗೆ ಬಂದಿತು, 9 “ಮನುಷ್ಯಪುತ್ರನೇ, ಪ್ರವಾದಿಸಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು:
13 “ ‘ಪರಿಶೋಧನೆಯು ಖಂಡಿತವಾಗಿ ಬರುವುದಿಲ್ಲ. ಖಡ್ಗವು ತಿರಸ್ಕರಿಸುವ ಯೆಹೂದದ ರಾಜದಂಡವು ಮುಂದುವರಿಯದಿದ್ದರೆ ಹೇಗೆ? ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’
18 ಯೆಹೋವ ದೇವರ ವಾಕ್ಯವು ನನಗೆ ಬಂದಿತು: 19 “ಮನುಷ್ಯಪುತ್ರನೇ, ಬಾಬಿಲೋನಿನ ಅರಸನ ಖಡ್ಗವು ಬರುವ ಹಾಗೆ ನೀನು ಎರಡು ಮಾರ್ಗಗಳನ್ನು ನೇಮಿಸಿಕೋ. ಅವೆರಡು ದಾರಿಗಳು ಒಂದೇ ದೇಶದಿಂದ ಹೊರಟ ಹಾಗಿರಲಿ. ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು. 20 ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ, ಯೆಹೂದದ ಕೋಟೆ ಕೊತ್ತಲಗಳಿಂದ ಕುಡಿದ ಯೆರೂಸಲೇಮಿಗೂ ಆ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು. 21 ಬಾಬಿಲೋನಿನ ಅರಸನು, ಮಾರ್ಗವು ಒಡೆಯುವ ಸ್ಥಳದಲ್ಲಿ ಶಕುನವನ್ನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿದನು; ಮೂರ್ತಿಗಳ ಹತ್ತಿರ ವಿಚಾರಿಸಿದನು; ಅವನು ಹತ್ಯೆ ಮಾಡಿದ ಪ್ರಾಣಿಯ ಯಕೃತ್ತನ್ನು ಪರೀಕ್ಷಿಸುತ್ತಾರೆ. 22 ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ. 23 ಆದರೆ ಅವರು ತಾವು ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ನಂಬಿಕೆ ಇಟ್ಟಿದ್ದರಿಂದ, ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವುದು. ಆದರೆ ಅವನು ಅವರ ಅಕ್ರಮವನ್ನು ಜ್ಞಾಪಕಪಡಿಸಿ, ಅವರನ್ನು ಸೆರೆಯಾಗಿ ಒಯ್ಯುವನು.
24 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಿಮ್ಮ ದ್ರೋಹಗಳು ಪ್ರಕಟವಾಗಿ, ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ, ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಗೆ ಸಿಕ್ಕಿ ಬೀಳುವಿರಿ.
25 “ ‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು. 26 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಮೊದಲಿದ್ದ ಹಾಗೆಯೇ ಇರುವುದಿಲ್ಲ; ತಗ್ಗಿಸಿಕೊಂಡವನನ್ನು ಹೆಚ್ಚಿಸಿ, ಹೆಚ್ಚಿಸಿಕೊಂಡವನನ್ನು ತಗ್ಗಿಸು. 27 ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’
28 “ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: