1 ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು. 2 ಆಗ ಅಸ್ಸೀರಿಯದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡನು. 3 ಆಗ ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವನ ಬಳಿಗೆ ಬಂದರು.
4 ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು:
11 ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.
12 ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.
13 ಆಗ ರಬ್ಷಾಕೆ ನಿಂತುಕೊಂಡು ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನೆಂದರೆ, “ನೀವು ಅಸ್ಸೀರಿಯದ ಮಹಾರಾಜನ ಮಾತನ್ನು ಕೇಳಿರಿ. 14 ಅರಸನು ಹೇಳುವುದೇನೆಂದರೆ: ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿರಿ ಏಕೆಂದರೆ ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ. 15 ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರೆಂದೂ, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲವೆಂದೂ ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವರು.’
16 “ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು. 17 ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.
18 “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆಯಾಗಿರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಸ್ಸೀರಿಯದ ಅರಸನ ಕೈಯಿಂದ ಬಿಡಿಸಿದ್ದು ಉಂಟೋ? 19 ಹಮಾತ್, ಅರ್ಪಾದ್, ಸೆಫರ್ವಯಿಮಿನ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ? 20 ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.
21 ಆದರೆ ಜನರು ಅವನಿಗೆ ಪ್ರತ್ಯುತ್ತರ ಕೊಡದೆ ಸುಮ್ಮನಿದ್ದರು. ಏಕೆಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.
22 ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
<- ಯೆಶಾಯ 35ಯೆಶಾಯ 37 ->