1 ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು. 2 ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು. 3 ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ,
“ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು.
ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.
5 ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.
6 ಆಗ ಸೆರಾಫಿಯರಲ್ಲಿ ಒಬ್ಬನು ಬಲಿಪೀಠದಿಂದ ತಾನು ಉರಿಯುವ ಕೆಂಡವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಹಾರಿ ಬಂದು, 7 ಅದರಿಂದ ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳನ್ನು ತಗಲಿದೆ. ನಿನ್ನ ದೋಷವು ತೊಲಗಿದೆ, ನಿನ್ನ ಪಾಪಪರಿಹಾರ ಆಯಿತು,” ಎಂದು ಹೇಳಿದನು.
8 ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ,