1 ಯೆಹೋವ ದೇವರು, “ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಸಾಮಾನ್ಯ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್, ಎಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ ಎಂದು ಬರೆ,” ಎಂಬುದಾಗಿ ನನಗೆ ಹೇಳಿದರು. 2 ನಾನು ಯಾಜಕನಾದ ಊರೀಯನನ್ನೂ ಯೆಬೆರೆಕ್ಯನ ಮಗನಾದ ಜೆಕರ್ಯನನ್ನೂ ನಂಬಿಗಸ್ತ ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು. 3 ಅನಂತರ ನಾನು ಪ್ರವಾದಿನಿಯಾದ ನನ್ನ ಹೆಂಡತಿಯನ್ನು ಕೂಡಲು, ಆಕೆಯು ಗರ್ಭಧರಿಸಿ ಒಬ್ಬ ಗಂಡುಮಗುನ್ನು ಹೆತ್ತಳು. ಆಗ ಯೆಹೋವ ದೇವರು ನನಗೆ, “ಆ ಮಗುವಿಗೆ, ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು, ಎಂದು ಹೇಳಿದರು. 4 ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು.
ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬಲೆಗೆ ಸಿಕ್ಕಿ ಬೀಳುವರು.”
16 ಸಾಕ್ಷಿಯನ್ನು ಕಟ್ಟಿಡು,
ನನ್ನ ಶಿಷ್ಯರೊಳಗೆ ದೇವರ ಶಿಕ್ಷಣವನ್ನು ಮುದ್ರಿಸು.
17 ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ
ಯೆಹೋವ ದೇವರಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.
ನಾನು ದೇವರ ಮೇಲೆ ಭರವಸೆ ಇಡುವೆನು.
18 ಇಗೋ, ನಾನೂ ಯೆಹೋವ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
ಕತ್ತಲೆ ಬೆಳಕಿಗೆ ತಿರುಗುತ್ತದೆ
19 ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ? 20 ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ. 21 ಅವರು ಘೋರಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯುವರು. ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ, ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು. 22 ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು.