1 ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ, 2 “ನೀನು ಎದ್ದು ಕುಂಬಾರನ ಮನೆಗೆ ಇಳಿದು ಹೋಗು. ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೊಡುತ್ತೇನೆ,” ಎಂದರು. 3 ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು. ಇಗೋ, ಅವನು ಚಕ್ರದ ಮೇಲೆ ಕೆಲಸ ಮಾಡುತ್ತಿದ್ದನು. 4 ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟು ಹೋಯಿತು. ಆಗ ಕುಂಬಾರನಿಗೆ ಒಳ್ಳೆಯದೆಂದು ತೋರುವ ಪ್ರಕಾರ, ಅದನ್ನು ಮತ್ತೊಂದು ಪಾತ್ರೆಯನ್ನಾಗಿ ಮಾಡಿದನು.
5 ಅನಂತರ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ, 6 “ಈ ಇಸ್ರಾಯೇಲಿನ ಮನೆತನದವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡಲಾರೆನೇ, ಎಂದು ಯೆಹೋವ ದೇವರು ಅನ್ನುತ್ತಾರೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ, ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ. 7 ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವುದಕ್ಕೂ ಕೆಡವುದಕ್ಕೂ ನಾಶಮಾಡುವುದಕ್ಕೂ ಮಾತಾಡುತ್ತೇನೋ, 8 ನಾನು ಆ ಜನಾಂಗಕ್ಕೆ ವಿರೋಧವಾಗಿ ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ, ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು. 9 ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಮಾತನಾಡುತ್ತೇನೋ, 10 ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ, ನಾನು ಅದಕ್ಕೆ ಉಪಕಾರ ಮಾಡುತ್ತೇನೆಂದು ಹೇಳಿದ ಒಳ್ಳೆಯದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.
11 “ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ. 12 ಆದರೆ ಅವರೋ ಏನೂ ಪ್ರಯೋಜನ ಇಲ್ಲ. ಏಕೆಂದರೆ ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು. ನಾವೆಲ್ಲರೂ ನಮ್ಮ ದುಷ್ಟ ಹೃದಯದ ಮೊಂಡುತನವನ್ನು ಅನುಸರಿಸುತ್ತೇವೆ,’ ಎಂದರು.”
13 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ:
18 ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.