1 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ನನಗೆ ಏಳು ಬಲಿಪೀಠಗಳನ್ನು ಕಟ್ಟಿ, ನನಗೆ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು. 2 ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು. ಬಾಲಾಕನು ಮತ್ತು ಬಿಳಾಮನು ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಬಲಿಪೀಠದ ಮೇಲೆ ಅರ್ಪಿಸಿದರು.
3 ಆಗ ಬಿಳಾಮನು ಬಾಲಾಕನಿಗೆ, “ನೀನು ನಿನ್ನ ದಹನಬಲಿಯ ಹತ್ತಿರ ನಿಂತುಕೋ, ನಾನು ಸ್ವಲ್ಪ ದೂರಹೋಗಿ ಬರುತ್ತೇನೆ. ಯೆಹೋವ ದೇವರು ನನಗೆ ದರ್ಶನ ಕೊಡಬಹುದು, ಅವರು ನನಗೆ ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುವೆನು,” ಎಂದು ಹೇಳಿ, ಒಂದು ಎತ್ತರವಾದ ಸ್ಥಳಕ್ಕೆ ಹೋದನು.
4 ಆಗ ದೇವರು ಬಿಳಾಮನನ್ನು ಸಂಧಿಸಿದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ,” ಎಂದನು.
5 ಯೆಹೋವ ದೇವರು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ, ನಾನು ಹೇಳಿದ್ದನ್ನು ತಿಳಿಸು,” ಎಂದರು.
6 ಆಗ ಅವನು ಬಾಲಾಕನ ಬಳಿಗೆ ತಿರುಗಿಬಂದನು. ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು. 7 ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ:
11 ಆಗ ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಯಿಸಿದೆನು, ನೀನು ಅವರನ್ನು ಶಪಿಸದೆ ಸಂಪೂರ್ಣವಾಗಿ ಆಶೀರ್ವದಿಸಿದೆ,” ಎಂದನು.
12 ಅದಕ್ಕೆ ಅವನು ಉತ್ತರವಾಗಿ, “ಯೆಹೋವ ದೇವರು ನನ್ನ ಬಾಯಿಯೊಳಗೆ ಇಡುವ ಮಾತನ್ನೇ ನಾನು ನುಡಿಯಬೇಕಲ್ಲವೇ?” ಎಂದನು.
13 ಬಾಲಾಕನು ಅವನಿಗೆ, “ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ, ಅವರನ್ನೆಲ್ಲಾ ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವೆ. ಅಲ್ಲಿಂದ ಅವರನ್ನು ನನಗೋಸ್ಕರ ಶಪಿಸು,” ಎಂದನು. 14 ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾದ ತುದಿಗೆ ಚೋಫೀಮ್ ಬಯಲಿಗೆ ಕರೆದುಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.
15 ಆಗ ಅವನು ಬಾಲಾಕನಿಗೆ, “ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ. ನಾನು ಅಲ್ಲಿ ಯೆಹೋವ ದೇವರನ್ನು ಎದುರುಗೊಳ್ಳುವೆನು,” ಎಂದನು.
16 ಆಗ ಯೆಹೋವ ದೇವರು ಬಿಳಾಮನ ಎದುರಿಗೆ ಬಂದು ಅವನ ಬಾಯಿಯೊಳಗೆ ವಾಕ್ಯವನ್ನಿಟ್ಟು, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.
17 ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು. ಬಾಲಾಕನು ಅವನಿಗೆ, “ಯೆಹೋವ ದೇವರು ಏನು ಹೇಳಿದ್ದಾರೆ,” ಎಂದನು.
18 ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ:
25 ಆಗ ಬಾಲಾಕನು ಬಿಳಾಮನಿಗೆ, “ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ,” ಎಂದನು.
26 ಆದರೆ ಬಿಳಾಮನು ಉತ್ತರವಾಗಿ, “ಬಾಲಾಕನಿಗೆ ಯೆಹೋವ ದೇವರು ಹೇಳುವುದನ್ನೆಲ್ಲಾ ನಾನು ಮಾಡುವೆನೆಂದು ನಿನಗೆ ಹೇಳಲಿಲ್ಲವೋ?” ಎಂದನು.
27 ಆಗ ಬಾಲಾಕನು ಬಿಳಾಮನಿಗೆ, “ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸುವುದು ಒಂದು ವೇಳೆ ದೇವರಿಗೆ ಯುಕ್ತವಾಗಿದ್ದೀತು,” ಎಂದನು. 28 ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿಯ ತುದಿಗೆ ಕರೆದುಕೊಂಡು ಹೋದನು.
29 ಬಿಳಾಮನು ಬಾಲಾಕನಿಗೆ, “ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಇಲ್ಲಿ ನನಗೆ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು. 30 ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ, ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.
<- ಅರಣ್ಯಕಾಂಡ 22ಅರಣ್ಯಕಾಂಡ 24 ->