1 ಮೋಶೆ ಆರೋನರ ನಾಯಕತ್ವದಲ್ಲಿ ಈಜಿಪ್ಟ್ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲರ ಪ್ರಯಾಣದ ಹಂತಗಳ ವಿವರ ಇಲ್ಲಿವೆ. 2 ಮೋಶೆಯು ಯೆಹೋವ ದೇವರ ಆಜ್ಞೆಯ ಪ್ರಕಾರ ಅವರ ಪ್ರಯಾಣದಲ್ಲಿ ತಂಗಿದ್ದ ಸ್ಥಳಗಳ ವಿವರಗಳನ್ನು ಬರೆದನು.
3 ಅವರ ಪ್ರಯಾಣಗಳ ವಿವರಗಳು ಯಾವುವೆಂದರೆ: ಅವರು ಮೊದಲನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪಸ್ಕಹಬ್ಬದ ಮರುದಿನ ಇಸ್ರಾಯೇಲರು ಸಮಸ್ತ ಈಜಿಪ್ಟನವರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟು ಹೋದರು. 4 ಹೇಗೆಂದರೆ ಆ ಕಾಲದಲ್ಲಿ ಯೆಹೋವ ದೇವರು ಈಜಿಪ್ಟಿನವರ ಸಮಸ್ತ ಚೊಚ್ಚಲಿನವರನ್ನು ಹೊಡೆದು ಆ ಮಕ್ಕಳ ಶವಗಳನ್ನು ಹೂಣಿಟ್ಟರು, ಯೆಹೋವ ದೇವರು ಅವರ ದೇವರುಗಳಿಗೂ ಶಿಕ್ಷೆ ಮಾಡಿದರು.
37 ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂತ್ಯದಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು. 38 ಆಗ ಯಾಜಕನಾದ ಆರೋನನು ಯೆಹೋವ ದೇವರ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ, ಅಲ್ಲಿ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನಿಧನ ಹೊಂದಿದನು. 39 ಆರೋನನು ಹೋರ್ ಗುಡ್ಡದಲ್ಲಿ ಮರಣಹೊಂದಿದಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.
40 ಆಗ ಕಾನಾನ್ ದೇಶದ ನೆಗೆವನಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಇಸ್ರಾಯೇಲರು ಬರುವುದನ್ನು ಕೇಳಿದನು.
41 ಹೋರ್ ಗುಡ್ಡದಿಂದ ಅವರು ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.
48 ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋವಿಗೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಇಳಿದುಕೊಂಡರು. 49 ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ ಯೆಷೀಮೋತಿನಿಂದ ಮೋವಾಬಿನ ಬಯಲುಗಳಲ್ಲಿರುವ ಆಬೇಲ್ ಶಿಟ್ಟೀಮಿನ ಪರ್ಯಂತರದವರೆಗೂ ಇಳಿದುಕೊಂಡರು.
50 ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ, 51 “ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ, 52 ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು. 53 ನೀವು ಆ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸಮಾಡಿರಿ. ಏಕೆಂದರೆ ಅದನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. 54 ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟುಹಾಕಿ, ಸ್ವಾಧೀನಮಾಡಿ ಹಂಚಿಕೊಳ್ಳಬೇಕು. ಹೆಚ್ಚಾದವರಿಗೆ ಸೊತ್ತನ್ನು ಹೆಚ್ಚಿಸಿ, ಕಡಿಮೆಯಾದವರಿಗೆ ಸೊತ್ತನ್ನು ಕಡಿಮೆ ಮಾಡಬೇಕು. ಒಬ್ಬೊಬ್ಬನಿಗೆ ಚೀಟು ಎಲ್ಲಿ ಬೀಳುವುದೋ, ಅದೇ ಅವನಿಗಾಗಬೇಕು. ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
55 “ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು. 56 ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.’ ”