ಕೀರ್ತನೆ 141
ದಾವೀದನ ಕೀರ್ತನೆ. 
 1 ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ, ನನ್ನ ಬಳಿಗೆ ಬರಲು ತ್ವರೆಪಡಿರಿ. 
ನಾನು ನಿಮ್ಮನ್ನು ಕರೆಯುವಾಗ, ನನಗೆ ಕಿವಿಗೊಡಿರಿ. 
 2 ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, 
ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ. 
 3 ಯೆಹೋವ ದೇವರೇ, ನನ್ನ ಬಾಯಿಗೆ ಕಾವಲಿಡಿರಿ; 
ನನ್ನ ತುಟಿಗಳ ಕದವನ್ನು ಕಾಯಿರಿ; 
 4 ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು 
ಕೆಟ್ಟ ಕಾರ್ಯಗಳನ್ನು ಮಾಡಲು 
ನನ್ನ ಹೃದಯ ಸೆಳೆಯದಂತೆ ಕಾಪಾಡಿರಿ; 
ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ. 
 5 ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. 
ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; 
ನನ್ನ ತಲೆ ಅದನ್ನು ಬೇಡವೆನ್ನದಿರಲಿ; 
ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು. 
 6 ಅವರ ನ್ಯಾಯಾಧಿಪತಿಗಳು ಉನ್ನತ ಸ್ಥಳದಿಂದ ಕೆಳಬಿದ್ದಾಗ 
ಅವರು ನನ್ನ ಮಾತು ಕೇಳುವರು. 
 7 ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು 
ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.” 
 8 ಆದರೆ ಸಾರ್ವಭೌಮ ಯೆಹೋವ ದೇವರೇ, ನನ್ನ ಕಣ್ಣುಗಳು ನಿಮ್ಮ ಕಡೆ ಇವೆ; 
ನಿಮ್ಮನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡಿರಿ. 
 9 ಅವರು ನನಗೆ ಒಡ್ಡಿದ ಉರುಲಿನಿಂದಲೂ, 
ಅಪರಾಧಗಳ ನೇಣುಗಳಿಂದಲೂ ನನ್ನನ್ನು ಕಾಪಾಡಿರಿ. 
 10 ನಾನು ತಪ್ಪಿಸಿಕೊಂಡು ಸುರಕ್ಷಿತವಾಗಿ ಹೋಗುವಷ್ಟರಲ್ಲಿ 
 Languages
Languages