ಕೀರ್ತನೆ 81
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ; ಗಿತ್ತೀ ರಾಗದಿಂದ ಹಾಡತಕ್ಕದ್ದು. ಆಸಾಫನ ಕೀರ್ತನೆ. 
 1 ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; 
ಯಾಕೋಬನ ದೇವರಿಗೆ ಜಯಧ್ವನಿ ಗೈಯಿರಿ. 
 2 ವಾದ್ಯ ಪ್ರಾರಂಭಿಸಿರಿ; ದಮ್ಮಡಿಯನ್ನೂ, 
ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ಬಾರಿಸಿರಿ. 
 3 ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ 
ಕೊಂಬನ್ನು ಊದಿರಿ. 
 4 ಏಕೆಂದರೆ ಇದು ಇಸ್ರಾಯೇಲಿಗೆ ಕಟ್ಟಳೆ. 
ಯಾಕೋಬನ ದೇವರ ನ್ಯಾಯ ಪ್ರಮಾಣವೇ. 
 5 ದೇವರು ಈಜಿಪ್ಟಿಗೆ ವಿರೋಧವಾಗಿ ಹೊರಟಾಗ, 
ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು. 
ನಾವು ತಿಳಿಯದ ಭಾಷೆಯನ್ನು ಕೇಳಿದಾಗ: 
 6 “ಅವರ ಹೆಗಲ ಮೇಲಿಂದ ಭಾರವನ್ನು ತೆಗೆದುಹಾಕಿದೆನು, 
ಬುಟ್ಟಿಗಳಿಂದ ಅವರ ಕೈಗಳು ಬಿಡುಗಡೆಯಾದವು. 
 7 ಇಕ್ಕಟ್ಟಿನಲ್ಲಿ ನೀವು ಕರೆಮಾಡಿದಿರಿ, ಆಗ ನಾನು ನಿಮ್ಮನ್ನು ವಿಮೋಚಿಸಿದೆನು. 
ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟೆನು. 
ಮೆರೀಬಾ ನೀರಿನ ಹತ್ತಿರ ನಿಮ್ಮನ್ನು ಪರೀಕ್ಷಿಸಿದೆನು. 
 8 ನನ್ನ ಜನರೇ ಕೇಳಿರಿ, ಇಸ್ರಾಯೇಲೇ, 
ನೀನು ನನ್ನ ಮಾತನ್ನು ಕೇಳಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ. 
 9 ನಿಮ್ಮಲ್ಲಿ ಅನ್ಯದೇವರು ಇರಬಾರದು; 
ಪರದೇವರಿಗೆ ಅಡ್ಡ ಬೀಳಬಾರದು. 
 10 ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ತಂದ 
ನಿಮ್ಮ ದೇವರಾದ ಯೆಹೋವ ದೇವರು ನಾನೇ; 
ನಿಮ್ಮ ಬಾಯಿಯನ್ನು ಅಗಲವಾಗಿ ತೆರೆ, ಆಗ ಅದನ್ನು ತುಂಬಿಸುವೆನು. 
 11 “ಆದರೆ ನನ್ನ ಜನರು ನನ್ನ ಮಾತನ್ನು ಕೇಳಲಿಲ್ಲ; 
ಇಸ್ರಾಯೇಲು ನನಗೆ ಅಧೀನವಾಗಲಿಲ್ಲ. 
 12 ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; 
ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು. 
 13 “ಹಾ, ನನ್ನ ಜನರು ನನ್ನ ಮಾತನ್ನು ಕೇಳಿದರೆ ಒಳ್ಳೆದಾಗಿತ್ತು! 
ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಮೇಲಾಗುತ್ತಿತ್ತು, 
 14 ತೀವ್ರವಾಗಿ ಅವರ ಶತ್ರುಗಳನ್ನು ಧೀನಪಡಿಸುವೆನು. 
ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು. 
 15 ಯೆಹೋವ ದೇವರನ್ನು ದ್ವೇಷಿಸುವವರು ತಮ್ಮನ್ನು ತಾವೇ ದೇವರಿಗೆ ಒಪ್ಪಿಸಿಕೊಡುವರು. 
ಆದರೂ ಅವರಿಗೆ ಶಿಕ್ಷೆ ತಪ್ಪುವುದಿಲ್ಲ. 
 16 ನಿಮಗಾದರೋ ಉತ್ತಮವಾದ ಗೋಧಿಯನ್ನು ಊಟಕ್ಕೆ ಕೊಟ್ಟು, 
 Languages
Languages