1 ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. 2 ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು, “ಈ ಸುರುಳಿಯ ಮುದ್ರೆಗಳನ್ನು ಬರೆಯುವುದಕ್ಕೂ ಅದನ್ನು ಬಿಚ್ಚುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಧ್ವನಿಯಿಂದ ಕೂಗುವುದನ್ನು ಕಂಡೆನು. 3 ಆದರೆ ಆ ಸುರುಳಿಯನ್ನು ಬಿಚ್ಚಲು ಇಲ್ಲವೆ ಅದರಲ್ಲಿ ನೋಡಲು ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾವ ವ್ಯಕ್ತಿಗೂ ಆಗಲಿಲ್ಲ. 4 ಆಗ ಸುರುಳಿಯನ್ನು ಬಿಚ್ಚುವುದಕ್ಕಾಗಲಿ, ಅದರಲ್ಲಿ ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು. 5 ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.
6 ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು. 7 ಆ ಕುರಿಮರಿ ಆಗಿರುವವರು ಬಂದು ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯೊಳಗಿಂದ ಸುರುಳಿಯನ್ನು ತೆಗೆದುಕೊಂಡರು. 8 ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು. 9 ಅವರು ಹೊಸಹಾಡನ್ನು ಹಾಡುತ್ತಾ,
11 ಇದಲ್ಲದೆ ನಾನು ನೋಡಲಾಗಿ, ಸಿಂಹಾಸನದ ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು. 12 ಅವರು, ಮಹಾಧ್ವನಿಯಿಂದ:
13 ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು: